ಬೆಂಗಳೂರು: ಕೇಂದ್ರ ಸರಕಾರದ ಜನ ವಿರೋಧಿ ನಡೆ ಮತ್ತು ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರದ ವಿರೋಧ ಅಲೆಯಿಂದ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ಗೆ ಜನರು ಆಶೀರ್ವಾದ ಮಾಡಲಿದ್ದಾರೆ. ಬಹುಮತದೊಂದಿಗೆ ಈ ಬಾರಿ ಜೆಡಿಎಸ್ ಸರಕಾರ ಅಧಿಕಾರಕ್ಕೆ ಬರುವ ಭರವಸೆ ಇದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ವಿಶ್ವಾಸ ವ್ಯಕ್ತಪಡಿಸಿದರು.

ಬಸವನಗುಡಿ ವಿಧಾನಸಭಾ ಕ್ಷೇತ್ರದ ಅವಧಾನಿ ಸಭಾಂಗಣದಲ್ಲಿ ಭಾನುವಾರ ಜೈನ್ ಮೈನಾರಿಟಿ ಟ್ರಸ್ಟ್ ಹಮ್ಮಿಕೊಂಡಿದ್ದ ಮಾರ್ವಾಡಿ ಸಮುದಾಯದೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಂಡು ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರಕಾರಗಳ ದುರಾಡಳಿತಕ್ಕೆ ರಾಜ್ಯದ ಜನತೆ ಬೇಸತ್ತಿದ್ದಾರೆ. ಎರಡು ರಾಷ್ಟ್ರೀಯ ಪಕ್ಷಗಳ ಬಗ್ಗೆ, ಅವುಗಳ ಕಾರ್ಯವೈಖರಿ ಬಗ್ಗೆ ಜನ ರೋಸಿ ಹೋಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಪ್ರಾದೇಶಿಕ ಪಕ್ಷ ಅಧಿಕಾರಕ್ಕೆ ಬರಬೇಕು ಎಂದು ಮತದಾರರು ಬಯಿಸಿದ್ದಾರೆ. ಮತದಾರರು ಪ್ರಾದೇಶಿಕ ಪಕ್ಷ ಜೆಡಿಎಸ್‌ಗೆ ಹೆಚ್ಚು ಬೆಂಬಲ ನೀಡುತ್ತಾರೆ ಎನ್ನುವ ವಿಶ್ವಾಸ ನನ್ನಲ್ಲಿದೆ ಎಂದರು.

source: Vishvavani