ಬೆಂಗಳೂರು: ‘ಇಂಗ್ಲಿಷ್‌ ಮಾಧ್ಯಮ ಶಾಲೆಗಳಿಗೆ ಮಕ್ಕಳನ್ನು ಕಳುಹಿಸುವ ವಿವೇಚನೆ ಪೋಷಕರಿಗೆ ಬಿಟ್ಟಿದ್ದು. ರಾಜ್ಯ ಸರ್ಕಾರ ಈ ವಿಷಯದಲ್ಲಿ ಒತ್ತಡ ಹೇರುವುದಿಲ್ಲ’ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ
ಸ್ಪಷ್ಟಪಡಿಸಿದರು.

ವಾರ್ತಾ ಹಾಗೂ ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ವಿಧಾನ
ಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಸೋಮವಾರ ನಡೆದ ‘ಕರ್ನಾಟಕ ಮುನ್ನಡೆ’ ಪರಿಣಿತರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಒಂದು ಸಾವಿರ ಸರ್ಕಾರಿ ಶಾಲೆ
ಗಳಲ್ಲಿ ಇಂಗ್ಲಿಷ್‌ ಮಾಧ್ಯಮ ಬೋಧನೆ ಮಾಡುವ ವಿಷಯದ ಬಗ್ಗೆ ಪ್ರತಿ
ಕ್ರಿಯಿಸಿದ ಅವರು, ‘ಈ ಶಾಲೆಗಳಲ್ಲಿ ಇಂಗ್ಲಿಷ್‌ ಮಾಧ್ಯಮದ ಜತೆಗೆ ಕನ್ನಡ ಮಾಧ್ಯಮದಲ್ಲೂ ಪಾಠ ಮಾಡಲಾಗುತ್ತದೆ’ ಎಂದರು.

‘ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಪಡಿಸಲು ಈ ವರ್ಷ ₹1,200 ಕೋಟಿ ಅನುದಾನ ಮೀಸಲು ಇಡಲಾ
ಗಿದೆ. ಸರ್ಕಾರಿ ಶಾಲೆಗಳ ಬಲಪಡಿಸಲು ಕಾರ್ಪೊರೇಟ್‌ ಕಂಪನಿಗಳ ಸಾಮಾಜಿಕ ಹೊಣೆಗಾರಿಕೆ ನಿಧಿಯ (ಸಿಎಸ್‌ಆರ್‌) ನೆರವು ಪಡೆಯಲಾಗುತ್ತದೆ. ಬಿಬಿಎಂಪಿಯ ‘ರೋಶನಿ’ ಯೋಜನೆ ಮೂಲಕ ಈ ದಿಸೆಯಲ್ಲಿ ಹೆಜ್ಜೆ ಇಡಲಾಗಿದೆ. ಗುಣಾತ್ಮಕ ಶಿಕ್ಷಣ ನೀಡುವುದು ನಮ್ಮ ಗುರಿ’ ಎಂದು ಅವರು ಹೇಳಿದರು.

‘ಮೈತ್ರಿ ಸರ್ಕಾರದ ಆಡಳಿತದಲ್ಲಿ ಉತ್ತರ ಕರ್ನಾಟಕ, ದಕ್ಷಿಣ ಕರ್ನಾಟಕ, ಮಧ್ಯ ಕರ್ನಾಟಕ ಹಾಗೂ ಕರಾವಳಿ ಕರ್ನಾಟಕ ಎಂಬ ತಾರತಮ್ಯ ಮಾಡುವು
ದಿಲ್ಲ. ಸಮಗ್ರ ಕರ್ನಾಟಕ ಅಭಿವೃದ್ಧಿಯಾಗಬೇಕು ಎಂಬುದು ನಮ್ಮ ಸಂಕಲ್ಪ. ರಾಜ್ಯದ ಅಭಿವೃದ್ಧಿಯ ವಿಷಯದಲ್ಲಿ ಜನರು ನೇರವಾಗಿ ನನ್ನನ್ನು ಭೇಟಿ ಮಾಡಿ ಚರ್ಚೆ ಮಾಡಬಹುದು’ ಎಂದರು.

ಬಸ್‌ ಪ್ರಯಾಣ ದರ ಏರಿಕೆ ಇಲ್ಲ: ‘ಪೆಟ್ರೋಲ್‌ ಹಾಗೂ ಡೀಸೆಲ್‌ ದರ ₹3 ಹೆಚ್ಚಾಗಿದೆ. ಆದರೂ, ಸಾರಿಗೆ ನಿಗಮಗಳ ದರ ಏರಿಕೆ ಮಾಡುವುದಿಲ್ಲ. ನಿಗಮಗಳ ನ್ಯೂನತೆಗಳನ್ನು ಸರಿಪಡಿಸುತ್ತೇನೆ’ ಎಂದು ಕುಮಾರಸ್ವಾಮಿ ಹೇಳಿದರು.ಸಾರಿಗೆ ನಿಗಮಗಳನ್ನು ಉಳಿಸಲು ಪ್ರಯಾಣದರ ಏರಿಕೆ ಮಾಡಬೇಕು ಎಂಬ ನಿವೃತ್ತ ಐಎಎಸ್‌ ಅಧಿಕಾರಿ ಎಂ.ಕೆ.ಶಂಕರಲಿಂಗೇಗೌಡ ಸಲಹೆಗೆ ಪ್ರತಿಕ್ರಿಯಿಸಿದ ಅವರು, ‘ಈ ಹಿಂದೆ ನಾನು ಮುಖ್ಯಮಂತ್ರಿಯಾಗಿದ್ದಾಗ ಕೆಎಸ್‌
ಆರ್‌ಟಿಸಿ ₹1 ಸಾವಿರ ಕೋಟಿ ಠೇವಣಿ ಇಟ್ಟಿತ್ತು. ಈ ಹಣವನ್ನು ಅಭಿವೃದ್ಧಿ ಯೋಜನೆಗೆ ಬಳಸಿಕೊಳ್ಳಲು ನೀಡಿ ಎಂದು ಮನವಿ ಮಾಡಿದ್ದೆ. ಈಗ ಸಾರಿಗೆ ನಿಗಮಗಳು ಸಾಲದಲ್ಲಿವೆ’ ಎಂದರು.

ಮಹದಾಯಿ– ಅಧಿಸೂಚನೆ ಹೊರಡಿಸದ ಸರ್ಕಾರ: ‘ಮಹದಾಯಿ ಜಲವಿವಾದಕ್ಕೆ ಸಂಬಂಧಿಸಿದಂತೆ ನ್ಯಾಯಮಂಡಳಿ ನೀರು ಹಂಚಿಕೆ ಮಾಡಿದೆ. ನಮ್ಮ ಪಾಲಿನ ನೀರನ್ನು ಬಳಸಿ
ಕೊಳ್ಳಲು ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸ
ಬೇಕಿದೆ. ಕೇಂದ್ರ ಸರ್ಕಾರ ಈವರೆಗೆ ಅಧಿಸೂಚನೆ ಹೊರಡಿಸಿಲ್ಲ. ಪ್ರಧಾನಿ ಮೋದಿ ಹಾಗೂ ಜಲ ಸಾರಿಗೆ ಸಚಿವ ನಿತಿನ್‌ ಗಡ್ಕರಿ ಅವರಿಗೆ ಮನವಿ ಮಾಡಿ
ದರೂ ಪ್ರಯೋಜನವಾಗಿಲ್ಲ’ ಎಂದು ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದರು.

ವಿದ್ಯುತ್‌ ಸೋರಿಕೆ ತಡೆಗಟ್ಟಿ: ‘ರಾಜ್ಯ ಸರ್ಕಾರ ರೈತರ ಪಂಪ್‌ಸೆಟ್‌ಗಳಿಗೆ ಸಬ್ಸಿಡಿ ನೀಡಲು ವರ್ಷಕ್ಕೆ ₹11,250 ಕೋಟಿ ವೆಚ್ಚ ಮಾಡುತ್ತಿದೆ. ರೈತರ ಹೆಸರಿನಲ್ಲಿ ಈ ಹಣ ಸೋರಿಕೆ ಆಗುತ್ತಿದೆ. ಈ ಸೋರಿಕೆಗೆ ಕಡಿವಾಣ ಹಾಕಬೇಕು’ ಎಂದು ನಿವೃತ್ತ ಐಎಎಸ್‌ ಅಧಿಕಾರಿ ಎಂ.ಆರ್.ಶ್ರೀನಿವಾಸಮೂರ್ತಿ ಮನವಿ ಮಾಡಿದರು. ಮುಖ್ಯಮಂತ್ರಿ ಪ್ರತಿಕ್ರಿಯಿಸಿ, ‘ರೈತರಿಗೆ ಸಬ್ಸಿಡಿ ನೀಡಲು 2008ರಲ್ಲಿ ₹3,500 ಕೋಟಿ ಮೀಸಲಿಡಲಾಗಿತ್ತು. ಈಗ ಅದು ₹11 ಸಾವಿರ ಕೋಟಿಗೆ ಏರಿದೆ. ವಿದ್ಯುತ್‌ ಸರಬರಾಜು ಕಂಪನಿಗಳು ₹16 ಸಾವಿರ ಕೋಟಿ ಸಾಲ
ದಲ್ಲಿವೆ. ವಿದ್ಯುತ್‌ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಚರ್ಚಿಸಲು ಶೀಘ್ರ ತಜ್ಞರ ಸಭೆ ನಡೆಸು
ತ್ತೇನೆ’ ಎಂದು ಭರವಸೆ ನೀಡಿದರು.

By R

You missed