ಬೆಂಗಳೂರು: ಎಚ್‌.ಡಿ. ಕುಮಾರಸ್ವಾಮಿ ಐದು ವರ್ಷಗಳ ಅವಧಿಗೆ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿ ಆಗಿರುತ್ತಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌ ಹೇಳಿದ್ದಾರೆ.

ಶುಕ್ರವಾರ ಮಾಧ್ಯಮಗೋಷ್ಠಿಯಲ್ಲಿ ಅವರು ಈ ವಿಷಯ ಸ್ಪಷ್ಟಪಡಿಸಿದರು.

ಕಾಂಗ್ರೆಸ್‌ ಮತ್ತು ಜೆಡಿಎಸ್‌ ಮೈತ್ರಿ ಸರ್ಕಾರ ರಾಜ್ಯಕ್ಕೆ ಮಾತ್ರವಲ್ಲ ದೇಶಕ್ಕೇ ಅನಿವಾರ್ಯವಾಗಿದೆ. ಪಾರದರ್ಶಕ, ಉತ್ತರದಾಯಿತ್ವ ಮತ್ತು ಸ್ಪಂದನಶೀಲವುಳ್ಳ ಆಡಳಿತವನ್ನು ನೀಡಲಿದೆ ಎಂದು ಹೇಳಿದರು.

ಸರ್ಕಾರ ರೈತರು, ಯುವಕರು ಮತ್ತು ಮಹಿಳೆಯರಿಗೆ ಆದ್ಯತೆ ನೀಡಲಿದೆ. ಎಲ್ಲ ಪ್ರದೇಶಗಳಿಗೂ ಸಮಾನ ಅವಕಾಶ, ಸಾಮಾಜಿಕ ನ್ಯಾಯ ಮತ್ತು ಕೋಮು ಸೌಹಾರ್ದಕ್ಕೆ ಸರ್ಕಾರ ಒತ್ತು ನೀಡಲಾಗುವುದು ಎಂದು ಹೇಳಿದರು.

ಚುನಾವಣೆಯಲ್ಲಿ ಜಂಟಿ ಹೋರಾಟ
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಜಂಟಿಯಾಗಿ ಬಿಜೆಪಿ ವಿರುದ್ಧ ಸೆಣಲಿವೆ ಎಂದೂ ತಿಳಿಸಿದರು.

ಲೋಕಸಭಾ ಚುನಾವಣೆ ದಿನಾಂಕ ಘೋಷಣೆಯಾದ ಬಳಿಕ ಸೀಟು ಹಂಚಿಕೆಯ ಬಗ್ಗೆ ತೀರ್ಮಾನ ನಡೆಸಲಾಗುವುದು ಎಂದು ವೇಣುಗೋಪಾಲ್‌ ತಿಳಿಸಿದರು.

You missed