Welcome to Janata Dal (Secular) Official Website
Welcome to Janata Dal (Secular) Official Website
Youth Wing President Nikhil Kumaraswamy.
State President Shri H.K Kumaraswamy
General Secretary Y.S.V Datta

ಬೆಂಗಳೂರು: ಕೋವಿಡ್ ಪ್ಯಾಕೇಜ್’ ಜೊತೆಗೆ ಜಿಎಸ್‌ಟಿ ಬಾಕಿ, ನೆರೆ-ಬರ ಪರಿಹಾರ ಸೇರಿದಂತೆ ಕೇಂದ್ರದಿಂದ ಬರಬೇಕಾದ ಇತರ ಬಾಕಿ ಹಣದ ಬಗ್ಗೆಯೂ ಬಿ.ಎಸ್.ಯಡಿಯೂರಪ್ಪ ಅವರು ಮೋದಿ ಜೊತೆಗಿನ ಸಭೆಯಲ್ಲಿ ಕೇಳಬೇಕು. ಲಾಕ್ ಡೌನ್ ನಿಂದಾಗಿ ರಾಜ್ಯ ಹಣಕಾಸಿನ ತೊಂದರೆ ಅನುಭವಿಸುತ್ತಿದೆ. ಈ ಹೊತ್ತಲ್ಲಿ ಕೇಂದ್ರದಿಂದ ಸೂಕ್ತ ನೆರವು ಬಾರದ ಹೊರತು ಕೋವಿಡ್ ನಿಯಂತ್ರಣ ಕಷ್ಟವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕಳೆದ 3 ದಿನಗಳ ಅಂಕಿಅಂಶ ಗಮನಿಸಿದರೆ ರಾಜ್ಯದಲ್ಲಿ ಕೋವಿಡ್ ಹೆಚ್ಚುತ್ತಿರುವಂತೆ ಕಾಣುತ್ತಿದೆ. ಹೀಗಾಗಿ ವೈದ್ಯಕೀಯ ಕ್ರಮಗಳನ್ನು ಬಿಗಿಗೊಳಿಸಬೇಕಿದೆ. ಜೊತೆಗೆ ನಷ್ಟಕ್ಕೊಳಗಾಗಿರುವ ಜನರಿಗೆ ಆರ್ಥಿಕ ಪರಿಹಾರ ನೀಡಬೇಕಿದೆ. ದೊಡ್ಡ ಮಟ್ಟದ ತೆರಿಗೆ ಸಂಗ್ರಹಿಸಿ ಕೇಂದ್ರಕ್ಕೆ ಕೊಡುವ ಕರ್ನಾಟಕದಂತಹ ದೊಡ್ಡ ರಾಜ್ಯಕ್ಕೆ ಸೂಕ್ತ ಪ್ಯಾಕೇಜ್ ಅತ್ಯಗತ್ಯ ಎಂದು ಹೇಳಿದ್ದಾರೆ.

ಕೊರೊನಾ ವೈರಸ್ ನಿಯಂತ್ರಣ, ಲಾಕ್ ಡೌನ್ ಕುರಿತಂತೆ ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ವಿವಿಧ ರಾಜ್ಯಗಳ ಸಿಎಂಗಳ ಜೊತೆ ಚರ್ಚೆ ನಡೆಸಲಿದ್ದಾರೆ. ಇದರಲ್ಲಿ ರಾಜ್ಯದ ಸಿಎಂ ಯಡಿಯೂರಪ್ಪ ಅವರೂ ಇರಲಿದ್ದಾರೆ. ಈ ಸಭೆಯಲ್ಲಿ ಬಿಎಸ್ವೈ ಅವರು ರಾಜ್ಯಕ್ಕೆ ‘ಕೋವಿಡ್ ಪ್ಯಾಕೇಜ್’ ನೀಡುವಂತೆ ಮೋದಿ ಅವರನ್ನು ಆಗ್ರಹಿಸಬೇಕು ಎಂದು ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

Press Briefings

ಇಂದು ದಾಸರಹಳ್ಳಿ ಶಾಸಕರಾದ ಮಂಜುನಾಥ್ ಅವರ ಕಚೇರಿಯಲ್ಲಿ ಕರೋನಾ ಲಾಕ್‌ ಡೌನ್ ಇಂದ ತೊಂದರೆಗೀಡಾಗಿದ್ದ , 150 ಛಾಯಾಗ್ರಾಹಕರಿಗೆ...