Welcome to Janata Dal (Secular) Official Website
Welcome to Janata Dal (Secular) Official Website
ಪ್ರತಿ ರೈತ ಕುಟುಂಬ 2017ರ ಡಿಸೆಂಬರ್‌ 1ರವರೆಗೆ ಮಾಡಿದ ₹ 2 ಲಕ್ಷದ ವರೆಗಿನ ಕೃಷಿ ಸಾಲವನ್ನು ಮನ್ನಾ ಮಾಡುವುದಾಗಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ  ಬಜೆಟ್‌ನಲ್ಲಿ ಘೋಷಿಸಿದ್ದಾರೆ.

ಬೆಂಗಳೂರು: ರೈತರ ಸಾಲಮನ್ನಾಗೆ ಆರ್ಥಿಕವಾಗಿ ಕೊರತೆ ಇಲ್ಲ. ಸಾಲಮನ್ನಾಕ್ಕಾಗಿ 6,500 ಕೋಟಿ ರೂ. ಮೀಸಲಿಟ್ಟಿದ್ದೇವೆ. ರಾಷ್ಟ್ರೀಯ ಬ್ಯಾಂಕುಗಳಲ್ಲಿನ 17 ಲಕ್ಷ ರೈತರ 50 ಸಾವಿರದವರೆಗಿನ ಸಾಲಮನ್ನಾ ಆಗಲಿದೆ ಎಂದು ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಎಂಟನೇ ತಾರೀಖಿನಿಂದ ಈ ಪ್ರಕ್ರಿಯೆ ಪ್ರಾರಂಭವಾಗಲಿದೆ. ಸಹಕಾರಿ ಬ್ಯಾಂಕ್‌ಗಳಿಗೆ ನ. 30 ರವರೆಗಿನ 1,300 ಕೋಟಿ ರೂ. ಹಣ ಬಿಡುಗಡೆ ಆಗಿದೆ. ಡಿಸೆಂಬರ್‌ನಲ್ಲಿ 1,200 ಕೋಟಿ ರೂ. ಬಿಡುಗಡೆ ಮಾಡಲು ತಯಾರಾಗಿದ್ದೇವೆ. ಸರ್ಕಾರಕ್ಕೆ 2 ಲಕ್ಷದ 20 ಸಾವಿರ ರೈತರು ಮಾಹಿತಿ ನೀಡಿದ್ದಾರೆ. ನಾವು ರೈತರಿಗೆ ಕಮಿಟ್ ಮಾಡಿಕೊಂಡಿದ್ದೇವೆ. ಕೇಂದ್ರ ಕೊಡಲಿ, ಬಿಡಲಿ ನಾವು ಸಾಲಮನ್ನಾ ಮಾಡುತ್ತೇವೆ ಎಂದು ತಿಳಿಸಿದರು.

ರಾಷ್ಟ್ರೀಕೃತ ರಾಷ್ಟ್ರೀಯ ಬ್ಯಾಂಕುಗಳಲ್ಲಿ ಮೊದಲ ಹಂತವಾಗಿ 17 ಲಕ್ಷ ರೈತರ 50 ಸಾವಿರದವರೆಗಿನ ಸಾಲಮನ್ನಾಗೆ ಈಗಾಗಲೇ ಅಧಿಕಾರಿಗಳಿಗೂ ಆದೇಶಿಸಿದ್ದೇನೆ. ಮೊದಲ ಹಂತದಲ್ಲಿ ಜನವರಿಯಲ್ಲಿ 50 ಸಾವಿರ ಸಾಲಮನ್ನಾ ಆಗಲಿದೆ. ರಾಜ್ಯದಲ್ಲಿ ಒಟ್ಟು 2 ಲಕ್ಷದ 20ಸಾವಿರ NP ಖಾತೆಗಳಿದ್ದು, ಮರುಪಾವತಿಯಾಗದ ಖಾತೆಗಳೆಂದು ಗುರುತಿಸಲಾಗಿದೆ. ಬ್ಯಾಂಕ್‌ನವರು ಮುಂಚಿತವಾಗಿ ಅಸಲಿನಲ್ಲಿ ಶೇ. 50 ರಷ್ಟು ಬಿಡಲಾಗುತ್ತದೆ ಎಂದಿದ್ದ ಬ್ಯಾಂಕ್‌ ಈಗ ಹಿಂದೆ ಸರಿದಿವೆ. ನಾವು ಶೇ. 50ರಷ್ಟು ಹಣ ನೀಡಲು ಮುಂದಾಗಿದ್ದೇವೆ ಎಂದು ಹೇಳಿದರು.

ರಾಷ್ಟ್ರೀಕೃತ ಬ್ಯಾಂಕ್‌ಗಳು ಕೇಂದ್ರದ ಅಡಿಯಲ್ಲಿ ಬರುತ್ತವೆ. ಬಿಜೆಪಿಯವರು ಸಾಲಮನ್ನಾಕ್ಕೆ ಇನ್ನು ಹಣ ಬಿಡುಗಡೆ ಮಾಡಿಲ್ಲ ಎಂದು ಆರೋಪಿಸುತ್ತಿದ್ದಾರೆ. ಆದರೆ, ಯಡಿಯೂರಪ್ಪನವರು ಕೇಂದ್ರದ ಬಳಿ ಕೇಳಬೇಕು. ಮೊದಲು ಅಲ್ಲಿ ಕೇಳುವುದನ್ನು ಬಿಟ್ಟು ನನ್ನ ಬಳಿ ಕೇಳುವುದಲ್ಲ. ಅಧಿವೇಶನದಲ್ಲಿ ಈ ಎಲ್ಲ ವಿಚಾರ ಚರ್ಚಿಸಲು ಸಿದ್ಧವಾಗಿದ್ದೇನೆ ಎಂದರು.

ಶೇ. 50ರಷ್ಟನ್ನು ಕೇಂದ್ರ ನೀಡಬೇಕೆಂದು ಕೇಳಿದ್ದರೂ ಸರ್ಕಾರ ಸ್ಪಂದಿಸಿಲ್ಲ. ಎರಡು ಭಾರಿ ಭೇಟಿ ನೀಡಿದಾಗಲೂ ಶೇ. 50ರಷ್ಟು ಸಾಲದ ಹೊರೆ ಹೊರುವಂತೆ ಮನವಿ ಮಾಡಿದ್ದೇವೆ. ಹೀಗಿದ್ದರೂ ನಾವು ಕೇಂದ್ರಕ್ಕೆ ಅಂಟಿಕೊಂಡು ನಿಂತಿಲ್ಲ. ಬ್ಯಾಂಕುಗಳ ಜತೆ ನಿರಂತರ ಸಭೆ ನಡೆಯುತ್ತಿದೆ. ಸರ್ಕಾರ ಮುಖ್ಯಕಾರ್ಯದರ್ಶಿಗಳು ಸಭೆ ನಡೆಸುತ್ತಲೇ ಇದ್ದಾರೆ ಎಂದು ಹೇಳಿದರು

Press Briefings

ಬೆಂಗಳೂರು, ಜೂ.3- ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅವರು ತಮ್ಮ ಗ್ರಾಮ ವಾಸ್ತವ್ಯವನ್ನು ಜೂನ್ 21ರಂದು ಯಾದಗಿರಿ ಜಿಲ್ಲೆಯ...