ಬೆಂಗಳೂರು: ಪ್ರಾದೇಶಿಕ ಪಕ್ಷ ಉಳಿಸಲು ನಾನು ಈ ವಯಸ್ಸಿನಲ್ಲೂ ಹೋರಾಟ ಮಾಡಬೇಕಾಗಿದೆ ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ತಿಳಿಸಿದ್ದಾರೆ.

ದಾಸರಹಳ್ಳಿಯಲ್ಲಿ ಬಿಜೆಪಿ ಮುಖಂಡ ಕೆ.ಸಿ.ವೆಂಕಟೇಶ್‌ ಅವರನ್ನು ಜೆಡಿಎಸ್‌ಗೆ ಸೇರ್ಪಡೆ ಮಾಡಿಕೊಂಡು ಮಾನಾಡಿದ ಆವರು, ರಾಜ್ಯದ ಸಮಸ್ಯೆಗಳ ಪರಿಹಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗುವುದೊಂದೇ ಪರಿಹಾರ ಎಂದು ಹೇಳಿದರು.

ರಾಜ್ಯದಲ್ಲಿ ಜೆಡಿಎಸ್‌ ಅಲೆ ಇದೆ. ಕಾಂಗ್ರೆಸ್‌ ಹಾಗೂ ಬಿಜೆಪಿಯಿಂದ ಹಲವಾರು ಮುಖಂಡರು ಜೆಡಿಎಸ್‌ಗೆ ಸೇರ್ಪಡೆಯಾಗುತ್ತಿದ್ದಾರೆ. ಎಲ್ಲರನ್ನೂ ಮನೆ ಮಕ್ಕಳಂತೆ ನೋಡಿಕೊಳ್ಳಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ ಎಂದು ತಿಳಿಸಿದರು.

ಬೆಂಗಳೂರಿನಲ್ಲಿ ದಾಸರಹಳ್ಳಿ ಸೇರಿ ಅತಿ ಹೆಚ್ಚು ಸೀಟುಗಳನ್ನು ನಾವು ಗೆಲ್ಲಲಿದ್ದೇವೆ. ಇಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ನನಗೆ ಗೊತ್ತಿದೆ. ಇದಕ್ಕೆ ಇತಿಶ್ರೀ ಹಾಡಲೇಬೇಕಿದೆ ಎಂದು ಹೇಳಿದರು.

ಕಾವೇರಿ ವಿಚಾರದ ಬಗ್ಗೆ ಯಾರನ್ನೂ ನಾನು ದೂರುವುದಿಲ್ಲ. ಎಲ್ಲರೂ ಒಗ್ಗಟ್ಟಾಗಿ ನಮ್ಮ ರಾಜ್ಯದ ಪರವಾಗಿ ಕೆಲಸ ಮಾಡಬೇಕು. ಈಗಾಗಲೇ ನೀರಾವರಿ ಸಚಿವರ ಜತೆ ಮಾತುಕತೆ ನಡೆಸಿದ್ದೆನೆ. ಸಕಾರಾತ್ಮಕವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ತಮಿಳುನಾಡು ಕಡೆಯಿಂದಲೂ ಒತ್ತಡ ಇದೆ. ನಾವು ಎಲ್ಲರೂ ಪಕ್ಷ ಪಕ್ಕಕ್ಕಿಟ್ಟು ರಾಜ್ಯದ ಹಿತಕ್ಕಾಗಿ ಶ್ರಮಿಸಬೇಕು. ಲಿಂಗಾಯಿತ ದರ್ಮದ ವಿಚಾರವಾಗಿ ಮುಂದಿನ ದಿನಗಳಲ್ಲಿ ಮಾತನಾಡುತ್ತೇನೆ.
– ಎಚ್‌.ಡಿ.ದೇವೇಗೌಡ, ಮಾಜಿ ಪ್ರಧಾನಿ

By R

You missed