ಬೆಂಗಳೂರು: ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದ್ದು, ಈಗಾಗಲೇ ವಿವಿಧೆ ಕಡೆಗಳಲ್ಲಿ ಭಾರೀ ಮಳೆ ಸುರಿದು ಸಂಭವಿಸಿರುವ ಹಾನಿ ಕುರಿತು ಚರ್ಚಿಸಲು ಜೂನ್‌ 13ರಂದು ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹಿರಿಯ ಅಧಿಕಾರಿಗಳ ಸಭೆ ಕರೆದಿದ್ದಾರೆ.

ಇತ್ತೀಚೆಗೆ ಕರಾವಳಿ ಪ್ರದೇಶ, ಮಲೆನಾಡು ಭಾಗಗಳಲ್ಲಿ ಮಳೆ ಸುರಿದು ಕೆಲವೆಡೆ ಸಾವುನೋವು ಸಂಭವಿಸಿತ್ತು. ಈ ವೇಳೆ ಸಿಎಂ  ಸರ್ಕಾರದ ಮುಖ್ಯ ಕಾರ್ಯದರ್ಶಿ ರತ್ನಪ್ರಭಾ ಅವರಿಂದ ಮಾಹಿತಿ ಪಡೆದಿದ್ದರು. ಅಲ್ಲದೆ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಆಯಾ ಜಿಲ್ಲೆಗಳಿಗೆ ತೆರಳಿ ಮುಂಜಾಗ್ರತಾ ಕ್ರಮ, ಪರಿಹಾರ ನೀಡುವ
ಕುರಿತು ಜಿಲ್ಲಾಡಳಿತಗಳಿಗೆ ನೆರವಾಗಬೇಕು ಎಂದು ಸೂಚಿಸಿದ್ದರು.

ಈ ಸಭೆಯಲ್ಲಿ ಮುಖ್ಯಮಂತ್ರಿ, ರಾಜ್ಯದಲ್ಲಿ ಸಂಭವಿಸಿದ ಮಳೆ ಹಾನಿ, ಕೈಗೊಂಡ ಮುಂಜಾಗ್ರತಾ ಕ್ರಮಗಳ ಕುರಿತು ಅಧಿಕಾರಿಗಳ ಜತೆ ಚರ್ಚೆ ನಡೆಸಲಿದ್ದಾರೆ. ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ, ಕಾರ್ಯದರ್ಶಿ ಮತ್ತು ಉಸ್ತುವಾರಿ ಕಾರ್ಯದರ್ಶಿ ಗಳು ಮಾಹಿತಿ ಸಹಿತ ಸಭೆಗೆ ಹಾಜರಾಗಬೇಕು ಎಂದು ಸೂಚಿಸಲಾಗಿದೆ.

By R

You missed