Welcome to Janata Dal (Secular) Official Website
Welcome to Janata Dal (Secular) Official Website
ಪ್ರತಿ ರೈತ ಕುಟುಂಬ 2017ರ ಡಿಸೆಂಬರ್‌ 1ರವರೆಗೆ ಮಾಡಿದ ₹ 2 ಲಕ್ಷದ ವರೆಗಿನ ಕೃಷಿ ಸಾಲವನ್ನು ಮನ್ನಾ ಮಾಡುವುದಾಗಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ  ಬಜೆಟ್‌ನಲ್ಲಿ ಘೋಷಿಸಿದ್ದಾರೆ.

ಜೂನಿಯರ್‌ ಕಾಲೇಜು ಮೈದಾನದಲ್ಲಿ ಗುರುವಾರ ನಡೆದ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಉದ್ಘಾಟಿಸಿದರು. ಪರಿಷತ್‌ ಸದಸ್ಯ ಅ.ದೇವೇಗೌಡ, ಸಚಿವರಾದ ಎಚ್.ಡಿ. ರೇವಣ್ಣ, ಜಿ.ಟಿ. ದೇವೇಗೌಡ, ಸಂಸದ ಡಿ.ಕೆ. ಸುರೇಶ್, ಶಾಸಕ ಎ.ಮಂಜುನಾಥ್, ಸಚಿವ ಸಾ.ರ.ಮಹೇಶ್‌, ಜಿ.ಪಂ. ಅಧ್ಯಕ್ಷ ಸಿ.ಪಿ. ರಾಜೇಶ್‌, ನಗರಸಭೆ ಪ್ರಭಾರ ಅಧ್ಯಕ್ಷೆ ಮಂಗಳಾ ಇದ್ದರು

ರಾಮನಗರ: ರಾಜ್ಯದ ಪ್ರತಿ ಹಳ್ಳಿಗೂ ನದಿ ಮೂಲದಿಂದ ಶಾಶ್ವತ ಕುಡಿಯುವ ನೀರು ಪೂರೈಕೆ ಯೋಜನೆಯಾದ ‘ಜಲಧಾರೆ’ ಅನುಷ್ಟಾನಕ್ಕೆ ಸಿದ್ಧತೆ ನಡೆದಿದೆ. ಇದಕ್ಕಾಗಿ ₹60–70 ಸಾವಿರ ಕೋಟಿ ವೆಚ್ಚ ಅಂದಾಜಿಸಲಾಗಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.

ಇಲ್ಲಿನ ಜೂನಿಯರ್‌ ಕಾಲೇಜು ಮೈದಾನದಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ₹269 ಕೋಟಿ ವೆಚ್ಚದಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಪ್ರತಿ ನಾಗರಿಕನಿಗೂ ಶುದ್ಧ ನೀರು ಸಿಗಬೇಕು ಎನ್ನುವ ಆಶಯದೊಂದಿಗೆ ‘ಜಲಧಾರೆ’ ಯೋಜನೆ ಜಾರಿಯಾಗುತ್ತಿದೆ. ಇದರ ಯೋಜನಾ ವರದಿ ತಯಾರಿಕೆಗೆ ಈಗಾಗಲೇ ₹5 ಕೋಟಿ ಬಿಡುಗಡೆ ಮಾಡಲಾಗಿದೆ. ಈ ಯೋಜನೆ ಅಡಿ ರಾಮನಗರ ಜಿಲ್ಲೆಯಲ್ಲಿ ₹1600 ಕೋಟಿ ವೆಚ್ಚದಲ್ಲಿ ವಿವಿಧ ಕುಡಿಯುವ ನೀರು ಪೂರೈಕೆ ಯೋಜನೆಗಳಿಗೆ ಚಾಲನೆ ನೀಡಲಾಗುವುದು. ಕಾವೇರಿಯಿಂದ ಇಗ್ಗಲೂರು ಮೂಲಕ ಅಣೆಕಟ್ಟೆಗಳ ಭರ್ತಿ ಹಾಗೂ ಅಲ್ಲಿಂದ ರಾಮನಗರ, ಚನ್ನಪಟ್ಟಣ ತಾಲ್ಲೂಕಿನ ಹಳ್ಳಿಗಳಿಗೆ ನೀರು ಪೂರೈಸುವ ₹480 ಕೋಟಿ ವೆಚ್ಚದ ಯೋಜನೆಯೂ ಇದರಲ್ಲಿ ಸೇರಿದೆ ಎಂದರು.

‘ರಾಜ್ಯ ಸರ್ಕಾರ ಈಗಾಗಲೇ 100 ದಿನಗಳ ಕಾಲ ಯಶಸ್ವಿ ಆಡಳಿತ ನೀಡಿದೆ. ಇಂದಿನಿಂದ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಅಧಿಕೃತ ಚಾಲನೆ ದೊರೆತಿದೆ. ಸಾಲಮನ್ನಾ, ಸರ್ಕಾರಿ ನೌಕರರಿಗಾಗಿ ಆರನೇ ವೇತನ ಆಯೋಗ ಶಿಫಾರಸು ಜಾರಿ ಮೊದಲಾದ ಹೊರೆಗಳ ನಡುವೆಯೂ ಅನೇಕ ಹೊಸ ಯೋಜನೆಗಳನ್ನು ಜಾರಿಗೆ ತರಲಾಗುತ್ತಿದೆ. ರಾಜ್ಯದಲ್ಲಿ ತೆಂಗು ಬೆಳೆಗಾರರಿಗೆ ನಷ್ಟವಾಗುವ ಪ್ರತಿ ಗಿಡಕ್ಕೆ ₹500ರಂತೆ ಎಕರೆಗೆ ₹20 ಸಾವಿರವರೆಗೂ ಪರಿಹಾರ ನೀಡುವ ಯೋಜನೆ ಬಜೆಟ್‌ನಲ್ಲಿ ಘೋಷಿಸಲಾಗಿದೆ. ಇದರಿಂದ ಈ ಭಾಗದ ಸಾವಿರಾರು ರೈತರಿಗೆ ಅನುಕೂಲ ಆಗಲಿದೆ’ ಎಂದರು.

ವೃಷಭಾವತಿ ಕಣಿವೆ ಹಿಂದೆಂದಿಗಿಂತ ಹೆಚ್ಚು ಕಲುಷಿತವಾಗಿದ್ದು, ಬೈರಮಂಗಲ ಕೆರೆಯಲ್ಲಿನ ನೊರೆ ಆತಂಕ ಹುಟ್ಟಿಸಿದೆ. ಹೀಗಾಗಿ ಬೆಂಗಳೂರಿನ ಚರಂಡಿ ನೀರಿನ ಶುದ್ಧೀಕರಣ ಕಾಮಗಾರಿಗೆ ಶೀಘ್ರ ಚಾಲನೆ ನೀಡಲಾಗುವುದು ಎಂದರು.

ಇದೇ 8ರಂದು ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಉದ್ಯೋಗ ಮೇಳ ಆಯೋಜಿಸಿದ್ದು, ಸಾವಿರಾರು ಯುವಜನರಿಗೆ ಉದ್ಯೋಗ ಸಿಗುವ ನಿರೀಕ್ಷೆ ಇದೆ. ಬೆಂಗಳೂರು–ಮೈಸೂರು ಎಕ್ಸ್‌ ಪ್ರೆಸ್ ಹೈವೆ ಕಾಮಗಾರಿಗೆ ₹4ಸಾವಿರ ಕೋಟಿ ನೀಡಲಾಗುತ್ತಿದೆ ಎಂದರು.

ಇಂಧನ ಸಚಿವ ಎಚ್.ಡಿ.ರೇವಣ್ಣ ಮಾತನಾಡಿ ‘ ಜಿಲ್ಲೆಯಲ್ಲಿ ಕನಕಪುರ–ರಾಮನಗರ–ಮಾಗಡಿ ರಸ್ತೆ ಅಭಿವೃದ್ಧಿಗೆ ₹500 ಕೋಟಿ ವೆಚ್ಚದ ಯೋಜನೆ ಸಿದ್ಧವಾಗಿದ್ದು, ಶೀಘ್ರ ಟೆಂಡರ್ ಕರೆಯಲಾಗುವುದು. ರಾಮನಗರ–ಚನ್ನಪಟ್ಟಣ ಬೈಪಾಸ್ ರಸ್ತೆ ನಿರ್ಮಾಣಕ್ಕೆ ₹400 ಕೋಟಿ ವೆಚ್ಚ ಅಂದಾಜಿಸಲಾಗಿದೆ. ಇದಲ್ಲದೆ ಜಿಲ್ಲೆಯ 100 ಕಿ.ಮೀ. ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ರಾಜೀವ್‌ಗಾಂಧಿ ಆರೋಗ್ಯ ವಿ.ವಿ.ಕ್ಯಾಂಪಸ್ ನಿರ್ಮಾಣಕ್ಕಾಗಿ ₹580 ಕೋಟಿ ವೆಚ್ಚದ ಕಾಮಗಾರಿಗೂ ಟೆಂಡರ್ ಪ್ರಕ್ರಿಯೆ ಆರಂಭವಾಗಲಿದೆ’ ಎಂದರು.

ರೇಷ್ಮೆ ಸಚಿವ ಸಾ.ರ.ಮಹೇಶ್‌, ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ, ಸಣ್ಣ ನೀರಾವರಿ ಸಚಿವ ಸಿ.ಎಸ್. ಪುಟ್ಟರಾಜು, ಸಂಸದ ಡಿ.ಕೆ.ಸುರೇಶ್, ಶಾಸಕ ಎ.ಮಂಜುನಾಥ್‌, ವಿಧಾನ ಪರಿಷತ್‌ ಸದಸ್ಯ ಅ. ದೇವೇಗೌಡ, ಕೆಎಂಎಫ್‌ ಅಧ್ಯಕ್ಷ ಪಿ.ನಾಗರಾಜು, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸಿ.ಪಿ.ರಾಜೇಶ್‌, ಉಪಾಧ್ಯಕ್ಷೆ ದಿವ್ಯಾ ಗಂಗಾಧರ್, ನಗರಸಭೆ ಪ್ರಭಾರ ಅಧ್ಯಕ್ಷೆ ಮಂಗಳಾ ಶಂಭುಲಿಂಗಯ್ಯ, ಲೋಕೋಪಯೋಗಿ ಇಲಾಖೆ ಕಾರ್ಯದರ್ಶಿ ಕೆ.ಎಸ್. ಕಷ್ಣಾರೆಡ್ಡಿ, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಜನೀಶ್‌ ಗೋಯಲ್‌, ಜಿಲ್ಲಾಧಿಕಾರಿ ಕೆ.ರಾಜೇಂದ್ರ, ಜಿ.ಪಂ.ಸಿಇಒ ಮುಲ್ಲೈ ಮುಹಿಲನ್‌, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಬಿ.ರಮೇಶ್ ಇದ್ದರು.

ಶಿಕ್ಷಕಿ ಶಾರದಾ ಪ್ರಾರ್ಥಿಸಿದರು. ಗಾಯಕ ಚಂದ್ರಶೇಖರ್‌ ನಾಡಗೀತೆ, ರೈತ ಗೀತೆ ಹಾಡಿದರು. ಜಿಲ್ಲಾಧಿಕಾರಿ ಕೆ. ರಾಜೇಂದ್ರ ಸ್ವಾಗತಿಸಿದರು. ಶಿವಸ್ವಾಮಿ ನಿರೂಪಿಸಿದರು.

Share with Your Friends and Family

Press Briefings

ಬೆಂಗಳೂರು: ‘ಸರ್ಕಾರ ಉರುಳುತ್ತದೆ ಎಂದು ಭಾವಿಸಿರುವ ಕೆಲವು ಅಧಿಕಾರಿಗಳು ತಮಗೆ ತಿಳಿದಂತೆ ಕೆಲಸ ಮಾಡುತ್ತಿದ್ದಾರೆ. ಒಂದು ವಾರದಲ್ಲಿ ಅವರು...

    ಬೆಂಗಳೂರು: ಸಿಗಡಿ ರಫ್ತು ಸಂದರ್ಭದಲ್ಲಿ ಅವುಗಳಲ್ಲಿರುವ ಜೀವಪ್ರತಿರೋಧಕ ಅಂಶಗಳನ್ನು ಪತ್ತೆ ಹಚ್ಚಿ ನಿಯಂತ್ರಣ ಹೇರುವ ವಿಚಾರಕ್ಕೆ...

ಶಿವಮೊಗ್ಗ: ದೇಶದ ಇತಿಹಾಸದಲ್ಲೇ ವಿಶಿಷ್ಟ ಕಾರ್ಯವನ್ನು ಎಚ್.ಡಿ. ಕುಮಾರಸ್ವಾಮಿ ಮಾಡಿದ್ದಾರೆ. ತನ್ನ ಪಕ್ಷಕ್ಕೆ ಶಕ್ತಿ ಇಲ್ಲದಿದ್ದರೂ ರೈತರಿಗೆ ಶಕ್ತಿ ತುಂಬುವ ಕಾರ್ಯ ಹಾಗೂ...

ಎಚ್‌.ಡಿ. ಜೀವನಚರಿತ್ರೆ ಆಧರಿಸಿ ಉಪನ್ಯಾಸಕ ಫಯಾಜ್‌ ಪಾಷಾ ಬರೆದಿರುವ ‘ನಮ್ಮೂರ ದ್ಯಾವಪ್ಪ’ ಪುಸ್ತಕವನ್ನು ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ...