ಕೊಪ್ಪ: ಕುಮಾರಸ್ವಾಮಿ ಮತ್ತು ಅಮಿತ್ ಶಾ ಒಂದೇ ಕುಳಿತುಕೊಂಡು ಚರ್ಚೆ ಮಾಡಿ ಒಡಂಬಡಿಕೆ ಮಾಡಿಕೊಂಡಿದ್ದಾರೆ. ಜೆಡಿಎಸ್ ಬಿಜೆಪಿಯ ಬಿ.ಟೀಮ್, ಜೆಡಿಎಸ್ ಎಂದರೆ ಜನತಾದಳ ಸಂಘಪರಿವಾರ ಎಂಬ ಸಿದ್ದರಾಮಯ್ಯನವರ ಹೇಳಿಕೆಗಳು ಪ್ರಪಂಚದ ಎಂಟನೇ ಅದ್ಭುತ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ಕೊಪ್ಪದ ಲಾಲ್‌ಬಹದ್ದೂರ್ ಶಾಸ್ತ್ರೀ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ಜೆಡಿಎಸ್ ಕುಮಾರಪರ್ವ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿ, ಸಿದ್ದರಾಮಯ್ಯನವರು ಹೇಳಿರುವ ಸಮಯದಲ್ಲಿ ನಾನು ಬೆಂಗಳೂರಿನ ಮಹಾಲಕ್ಷ್ಮೀ ಲೇಜೌಟ್ ವಿಧಾನಸಭಾ ಕ್ಷೇತ್ರದಲ್ಲಿ ನಮ್ಮ ಪಕ್ಷದ ಅಭ್ಯರ್ಥಿ ಪರವಾಗಿ ಮತಯಾಚನೆ ಮಾಡುತ್ತಿದ್ದೆ. ಶಾ ಬೆಳಗಾವಿಯಲ್ಲಿದ್ದರು. ಇದನ್ನು ತಿಳಿದುಕೊಳ್ಳುವ ವ್ಯವದಾನವೂ ಇಲ್ಲದೇ ಟಿವಿ ಮಾದ್ಯಮದವರು ಪ್ರಸಾರ ಮಾಡುತ್ತಾರೆ. ನನಗೆ ಅಮಿತ್ ಶಾ ಕಟ್ಟಿಕೊಂಡು ಏನಾಗಬೇಕು. ರಾಷ್ಟ್ರೀಯ ಪಕ್ಷಗಳಿಂದ ನಮ್ಮ ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ. ಇಲ್ಲಿ ಹಿಂದೂ, ಮುಸಲ್ಮಾನ ಸೇರಿದಂತೆ ಎಲ್ಲಾ ವರ್ಗದ ಜನ ಸೌಹಾರ್ಧದಿಂದ ಬಾಳಬೇಕಾಗಿದೆ. ಜಾತಿಯ ಹೆಸರಿನಲ್ಲಿ, ಧರ್ಮದ ಹೆಸರಿನಲ್ಲಿ ಸಮಾಜವನ್ನು ಒಡೆದು ಅಮಯಾಕ ಮಕ್ಕಳನ್ನು ಬಲಿಪಡೆದುಕೊಂಡು ನಿಮ್ಮ ಬದುಕಿನ ಜತೆ ಚೆಲ್ಲಾಟವಾಡುವ ಇಂತಹ ರಾಷ್ಟ್ರೀಯ ಪಕ್ಷಗಳು ನಮಗೆ ಅಗತ್ಯವಿಲ್ಲ ಎಂದರು.

By R

You missed