Welcome to Janata Dal (Secular) Official Website
Welcome to Janata Dal (Secular) Official Website
Youth Wing President Nikhil Kumaraswamy.
State President Shri H.K Kumaraswamy
General Secretary Y.S.V Datta

ಬೆಂಗಳೂರು: ‘ಆರ್ಥಿಕವಾಗಿ ಅಶಕ್ತರಾದವರು, ಸಣ್ಣ ವ್ಯಾಪಾರಿಗಳನ್ನು ಲೇವಾದೇವಿಗಾರರ ವಿಷವರ್ತುಲದಿಂದ ಪಾರು ಮಾಡುವ ಸದುದ್ದೇಶದಿಂದ ಬಡವರ ಬಂಧು ಕಾರ್ಯಕ್ರಮ ತರಲಾಗಿತ್ತು. ಆದರೆ ಈ ಯೋಜನೆಯನ್ನು ಕೊಲ್ಲುವ ಮೂಲಕ ಬಡವರ ವಿರೋಧಿಯಾಗಿದ್ದೀರಿ’ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ವಿರುದ್ಧ ಹರಿಹಾಯ್ದಿದ್ದಾರೆ.
‘ಬಡವರಿಂದ ದೂರ ಸಾಗುತ್ತಿರುವ ಬಂಧು’ ಶೀರ್ಷಿಕೆಯಡಿ ‘ಪ್ರಜಾವಾಣಿ’ಯಲ್ಲಿ ಶುಕ್ರವಾರ ಪ್ರಕಟವಾದ ವರದಿಯನ್ನು ಟ್ವಿಟರ್‌ನಲ್ಲಿ ಹಂಚಿಕೊಂಡು ಸರಣಿ ಟ್ವೀಟ್‌ ಮಾಡಿರುವ ಅವರು, ‘ಅಶಕ್ತರು ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಲು ನೆರವಾಗುತ್ತಿದ್ದ ಈ ಯೋಜನೆಗೆ ಚೈತನ್ಯ ತುಂಬಿ, ಇಲ್ಲವೇ ಹೋರಾಟ ಎದುರಿಸಿ’ ಎಂದೂ ಎಚ್ಚರಿಸಿದ್ದಾರೆ. ಆರ್ಥಿಕವಾಗಿ ಅಶಕ್ತರಾದವರು, ಸಣ್ಣ ವ್ಯಾಪಾರಿಗಳನ್ನು ಲೇವಾದೇವಿದಾರರ ವಿಷವರ್ತುಲದಿಂದ ಪಾರು ಮಾಡುವ ಸದುದ್ದೇಶದಿಂದ ಬಡವರ ಬಂಧು ಕಾರ್ಯಕ್ರಮವನ್ನು ಜಾರಿಗೆ ತರಲಾಗಿತ್ತು. ಅಶಕ್ತರು ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಲು ನೆರವಾಗುತ್ತಿದ್ದ ಈ ಯೋಜನೆಯನ್ನು ಕೊಲ್ಲುತ್ತಿರುವ ನೀವು ಬಡವರ ಸ್ವಾಭಿಮಾನವನ್ನು ಕೆಣಕಿದ್ದೀರಿ ಯಡಿಯೂರಪ್ಪನವರೇ…
2/3 pic.twitter.com/YzJ09uxSOX — H D Kumaraswamy (@hd_kumaraswamy) September 20, 2019 ‘ಈ ಯೋಜನೆ ವಿಫಲವಾಗಬಾರದು. ಇದರಲ್ಲಿ ಅಶಕ್ತರನ್ನು ಸಬಲರನ್ನಾಗಿಸಿ ದೇಶದ ಅಭಿವೃದ್ಧಿಯಲ್ಲಿ ಅವರನ್ನೂ ಒಳಗೊಳ್ಳುವಂತೆ ಮಾಡುವ ಪ್ರಮುಖ ಆರ್ಥಿಕ ಚಟುವಟಿಕೆ ಇದಾಗಿದೆ’ ಎಂದಿದ್ದಾರೆ.

Press Briefings

ಬೆಂಗಳೂರು: ‘ಕುಮಾರಸ್ವಾಮಿ ಸರ್ಕಾರ ನೀಡಿದ ಅನುದಾನ ಪಡೆದುಕೊಂಡು ಪಕ್ಷಕ್ಕೆ ದ್ರೋಹ ಮಾಡಿದವರಿಗೆ ಸೋಲು ಖಂಡಿತ, ಅವರಲ್ಲಿರುವ ಹಣವನ್ನು ಎದುರಿಸುವ...