Home Main Gallery

ಜೆಡಿಎಸ್ ಅಭ್ಯರ್ಥಿಯಾಗಿ ಅನಿತಾ ನಾಮಪತ್ರ ಸಲ್ಲಿಕೆ: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸಾಥ್‌

ರಾಮನಗರ: ಈ ಬಾರಿ ಉಪ ಚುನಾವಣೆಯಲ್ಲಿ ಮೂರು ಲೋಕಸಭೆ ಹಾಗೂ ಎರಡು ವಿಧಾನಸಭೆ ಕ್ಷೇತ್ರಗಳಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್‌ ಮೈತ್ರಿಕೂಟದ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ. ಇದು ಮುಂದಿನ…

ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರಿಗೆ ಮೈಸೂರು ದಸರಾ ಉತ್ಸವಕ್ಕೆ ಜಿಲ್ಲಾಡಳಿತ ಅಧಿಕೃತ ಆಹ್ವಾನವನ್ನು ನೀಡಿತು. ಉನ್ನತ ಶಿಕ್ಷಣ ಸಚಿವ ಜಿ ಟಿ ದೇವೇಗೌಡ ಅವರು ಜಿಲ್ಲಾಡಳಿತದ ಪರವಾಗಿ ಅಧಿಕೃತ ಆಹ್ವಾನ ನೀಡಿದರು. ಈ ಸಂದರ್ಭದಲ್ಲಿ ಸಚಿವ ಸಾ ರಾ ಮಹೇಶ್, ಶಾಸಕ ಹೆಚ್ ವಿಶ್ವನಾಥ್, ಮೈಸೂರು ಜಿಲ್ಲಾಧಿಕಾರಿ ಅಭಿರಾಂ ಶಂಕರ್ ಉಪಸ್ಥಿತರಿದ್ದರು.

ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾ ಆವರಣದಲ್ಲಿ ಇಂದು ಭಿನ್ನವಾಗಿ ಆರಂಭಿಸಲಾದ ಜನತಾದರ್ಶನಕ್ಕೆ ವಿಶೇಷ ವ್ಯವಸ್ಥೆ ಮಾಡಲಾಗಿತ್ತು. ಮುಖ್ಯಮಂತ್ರಿಗಳನ್ನು ನೋಡಲು ಬರುವವರಿಗೆ ತೊಂದರೆಯಾಗದಂತೆ ಅನುಕೂಲಗಳನ್ನು ಕಲ್ಪಿಸಿಕೊಡಲಾಗಿತ್ತು. ಎಲ್ಲರಿಗೂ ನೆರಳಿರುವಂತೆ ನೋಡಿಕೊಳ್ಳಲಾಗಿತ್ತಲ್ಲದೆ ಕುಳಿತುಕೊಳ್ಳಲು ಖುರ್ಚಿ ವ್ಯವಸ್ಥೆ ಮಾಡಲಾಗಿತ್ತು. ವಿಕಲಚೇತನರಿಗೆ ಪ್ರತ್ಯೇಕ ವ್ಯವಸ್ಥೆ ಗಮನ ಸೆಳೆಯುವಂತಿತ್ತು. ಎಲ್ಲರಿಗೂ ಕುಡಿಯುವ ನೀರು, ಉಪಾಹಾರದ ವ್ಯವಸ್ಥೆ ಇತ್ತು. ಪ್ರತಿಯೊಬ್ಬರಿಗೂ ಟೋಕನ್ ನೀಡಿದ ಕಾರಣ ವ್ಯವಸ್ಥಿತವಾಗಿ ಜನತಾದರ್ಶನ ಜರುಗಿತು

ಆಸ್ಟ್ರೇಲಿಯಾದ ಗೋಲ್ಡ್ ಕೋಸ್ಟ್‌ನಲ್ಲಿ ಇತ್ತೀಚೆಗೆ ನಡೆದ ಕಾಮನ್‌ವೆಲ್ತ್ ಕ್ರೀಡಾಕೂಟದ ವೇಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗಳಿಸಿದ ಉಡುಪಿ ಜಿಲ್ಲೆಯ ಗುರುರಾಜ ಪೂಜಾರಿ ಅವರಿಗೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ₹ 25 ಲಕ್ಷ ನಗದು ಪುರಸ್ಕಾರ ನೀಡಿ ಗೌರವಿಸಿದರು. ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ, ವಿಧಾನಪರಿಷತ್ ಸದಸ್ಯ ಕೆ.ಗೋವಿಂದರಾಜು ಇದ್ದರು

You missed