Welcome to Janata Dal (Secular) Official Website
Welcome to Janata Dal (Secular) Official Website
ಪ್ರತಿ ರೈತ ಕುಟುಂಬ 2017ರ ಡಿಸೆಂಬರ್‌ 1ರವರೆಗೆ ಮಾಡಿದ ₹ 2 ಲಕ್ಷದ ವರೆಗಿನ ಕೃಷಿ ಸಾಲವನ್ನು ಮನ್ನಾ ಮಾಡುವುದಾಗಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ  ಬಜೆಟ್‌ನಲ್ಲಿ ಘೋಷಿಸಿದ್ದಾರೆ.

ಬೆಂಗಳೂರು: ಅನಗತ್ಯ ದುಂದುವೆಚ್ಚಗಳಿಗೆ ಕಡಿವಾಣ ಹಾಕಲು ಚಿಂತನೆ ನಡೆಸಿರುವ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆರ್ಥಿಕ ಶಿಸ್ತಿಗೆ ಒತ್ತು ನೀಡಲು ಮುಂದಾಗಿದ್ದಾರೆ.

ಯಾವುದೇ ಸಚಿವರು ಹೊಸ ಕಾರು ಹಾಗೂ ತಮ್ಮ ಮನೆಗಳ ನವೀಕರಣ ಮಾಡಿಸಿಕೊಳ್ಳದಂತೆ ಸೂಚಿಸಿದ್ದಾರೆ. ಈ ಸಂಬಂಧ ಸರಕಾರದ ಮುಖ್ಯ ಕಾರ್ಯದರ್ಶಿ ರತ್ನಪ್ರಭಾ ಹಾಗೂ ಆಡಳಿತ ಮತ್ತು ಸಿಬ್ಬಂದಿ ಸುಧಾರಣೆ ಇಲಾಖೆಯ ಕಾರ್ಯದರ್ಶಿಗೆ ಮೌಖಿಕ ಸೂಚನೆ ನೀಡಿದ್ದಾರೆ. ಸರಕಾರಿ ನಿವಾಸಗಳ ನವೀಕರಣ ಮತ್ತು ಹೊಸ ಕಾರುಗಳ ಖರೀದಿಗೆ ಪತ್ರ ಬಂದರೆ ಮಾನ್ಯ ಮಾಡದಂತೆ ಹೇಳಿದ್ದಾರೆ ಎನ್ನಲಾಗಿದೆ.

ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ಸೇರಿದಂತೆ, ಒಟ್ಟು 27 ಮಂದಿ ಸಂಪುಟದಲ್ಲಿದ್ದು, ಪ್ರತಿಯೊಬ್ಬರಿಗೂ ಟಯೋಟೊ ಕ್ರೈಸ್ಟ್‌ ಹಾಗೂ ಫಾರ್ಚೂನ್ ಕಾರು ಖರೀದಿ ಮಾಡಲು ಕನಿಷ್ಠ ಒಂದು ವಾಹನಕ್ಕೆ 25 ರಿಂದ 30 ಲಕ್ಷ ರು.ಬೇಕಾಗುತ್ತದೆ. ಎಲ್ಲಾ ಸಚಿವರಿಗೆ ಹೊಸ ವಾಹನಗಳನ್ನೇ ಖರೀದಿ ಮಾಡ ಬೇಕೆಂದರೆ, ರಾಜ್ಯ ಸರಕಾರದ ಬೊಕ್ಕಸಕ್ಕೆ ಅಂದಾಜು 18 ರಿಂದ 20 ಕೋಟಿ ರು. ವೆಚ್ಚ ತಗಲುತ್ತದೆ.

ಹಾಗಾಗಿ, ಈ ಬಾರಿ ಇದಕ್ಕೆಲ್ಲಾ ಕಡಿವಾಣ ಹಾಕಲು ಮುಂದಾಗಿರುವ ಮುಖ್ಯಮಂತ್ರಿಗಳು, ಹೊಸ ವಾಹನಗಳ ಖರೀದಿಗೆ ಬ್ರೇಕ್ ಹಾಕಿದ್ದಾರೆ. ಸಚಿವರಾದ ಕೆ.ಜೆ.ಜಾರ್ಜ್, ಡಿ.ಕೆ.ಶಿವಕುಮಾರ್, ಪ್ರಿಯಾಂಕ ಖರ್ಗೆ, ಯು.ಟಿ.ಖಾದರ್, ಶಿವಾನಂದ ಪಾಟೀಲ್, ರಾಜ ಶೇಖರ ಪಾಟೀಲ್ ಹುಮ್ನಾಬಾದ್, ಜಯಮಾಲ, ಜಮೀರ್ ಅಹಮದ್ ಖಾನ್ ಸೇರಿದಂತೆ ಅನೇಕರು ಹೊಸ ಕಾರುಗಳಿಗೆ ಬೇಡಿಕೆ ಇಟ್ಟಿದ್ದರು. ಸರ್ಕಾರದ ಮುಖ್ಯ ಕಾರ್ಯದರ್ಶಿ ರತ್ನಪ್ರಭಾ ಅವರು ಸಹ ವಾಹನಗಳ ಖರೀದಿಗೆ ಸಿದ್ಧತೆ ಮಾಡಿಕೊಂಡಿದ್ದರು.

ಮುಖ್ಯಮಂತ್ರಿಯಾದ ಮೇಲೆ ತಾವು ಕೆಲವು ವಿಶೇಷ ಸಂದರ್ಭಗಳನ್ನು ಹೊರತುಪಡಿಸಿ, ಬೇರೆ ಸಂದರ್ಭಗಳಲ್ಲಿ ವಿಶೇಷ ವಿಮಾನ ಬಳಕೆ ಮಾಡುವುದಿಲ್ಲ ಎಂದಿದ್ದ ಸಿಎಂ, ಎರಡು ಬಾರಿ ದೆಹಲಿಗೆ ಹೋದರೂ ಸಾಮಾನ್ಯರಂತೆ ಪ್ರಯಾಣಿಸಿದ್ದಾರೆ. ವಿಧಾನಸಭೆ ಚುನಾವಣೆಗೂ ಮುನ್ನ ಕೊಟ್ಟ ಮಾತಿನಂತೆ ಕುಮಾರಸ್ವಾಮಿ ಬ್ಯಾಂಕ್‌ನಿಂದ ರೈತರು ಪಡೆದ ಸಾಲವನ್ನು ಮನ್ನಾ ಮಾಡಲೇ ಬೇಕಾದ ಅನಿವಾರ್ಯತೆಗೆ ಸಿಲುಕಿದ್ದಾರೆ. ಹೀಗಾಗಿ ಎಷ್ಟು ಸಾಧ್ಯವೋ ಅಷ್ಟು ಸರ್ಕಾರದ ದುಂದುವೆಚ್ಚಕ್ಕೆ ಕಡಿವಾಣ ಹಾಕುವುದು ಕುಮಾರಸ್ವಾಮಿಯವರ ಉದ್ದೇಶವಾಗಿದೆ.

Press Briefings

ಶಿವಮೊಗ್ಗ ಮೈತ್ರಿಕೂಟದ ಅಭ್ಯರ್ಥಿ ಮಧು ಬಂಗಾರಪ್ಪ ಗೆಲುವಿಗಾಗಿ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಅವರು ತಮ್ಮ ಹಿರಿಯ ಸ್ನೇಹಿತ ಕಾಗೋಡು...