ಮಂಡ್ಯ: ‘ನಾಗಮಂಗಲ ವಿಧಾನಸಭಾ ಕ್ಷೇತ್ರದಲ್ಲಿ ಶುಕ್ರವಾರ ಎಚ್‌.ಡಿ.ಕುಮಾರಸ್ವಾಮಿ ಅವರ ವಿಕಾಸ ಪರ್ವ ಕಾರ್ಯಕ್ರಮ ನಡೆಯಲಿದೆ’ ಎಂದು ವಿಧಾನ ಪರಿಷತ್ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ತಿಳಿಸಿದರು.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ‘ನಾಗಮಂಗಲ ಪಟ್ಟಣದ ಟಿ.ಬಿ.ಬಡಾವಣೆಯಿಂದ ಮೆರವಣಿಗೆ ಮೂಲಕ ಕುಮಾರಸ್ವಾಮಿ ಅವರನ್ನು ಕರೆದೊಯ್ಯಲಾಗುವುದು’ ಎಂದು ತಿಳಿಸಿದರು.

‘ಸಾರಿಗೆ ಬಸ್ ನಿಲ್ದಾಣದ ಬಳಿಯ ಆವರಣದಲ್ಲಿ ಸಮಾವೇಶ ನಡೆಯಲಿದೆ. 75-80 ಸಾವಿರ ಜನರು ಭಾಗವಹಿಸುವ ನಿರೀಕ್ಷೆಯಿದೆ. ತಾಲ್ಲೂಕಿನ ಜನ ಸ್ವಯಂಪ್ರೇರಿತರಾಗಿ ಭಾಗವಹಿಸಲು ಉತ್ಸುಕರಾಗಿದ್ದಾರೆ’ ಎಂದು ಹೇಳಿದರು.

 

ಜೆಡಿಎಸ್‌ ತಾಲ್ಲೂಕು ಘಟಕದ ಅಧ್ಯಕ್ಷ ಜವರೇಗೌಡ ಮಾತನಾಡಿ ‘ಕಾರ್ಯಕ್ರಮದಲ್ಲಿ 35-40 ಸಾವಿರ ಮಂದಿ ಮಹಿಳೆಯರೇ ಭಾಗವಹಿಸುವ ನಿರೀಕ್ಷೆ ಇದೆ. ನಾಗಮಂಗಲ ತಾಲ್ಲೂಕಿನಲ್ಲಿ ಕುಮಾರಸ್ವಾಮಿ ಅವರ ಪರ ಎದ್ದಿರುವ ಅಲೆಗೆ ಇದು ಸಾಕ್ಷಿಯಾಗಿದ ಎಂದು ಹೇಳಿದರು.

‘ಜೆಡಿಎಸ್‌ ವರಿಷ್ಠ ಎಚ್.ಡಿ.ದೇವೇಗೌಡ ಸಮಾವೇಶ ಉದ್ಘಾಟಿಸಲಿದ್ದು, ಮಾಜಿ ಸಚಿವರಾದ ಎಚ್.ಡಿ.ರೇವಣ್ಣ, ಬಸವರಾಜ ಹೊರಟ್ಟಿ, ಸಂಸದ ಸಿ.ಎಸ್.ಪುಟ್ಟರಾಜು, ವಿಧಾನ ಪರಿಷತ್ ಉಪಸಭಾಪತಿ ಮರಿತಿಬ್ಬೇಗೌಡ, ಶಾಸಕರಾದ ಡಿ.ಸಿ.ತಮ್ಮಣ್ಣ, ಜಿ.ಟಿ.ದೇವೇಗೌಡ, ಸಾ.ರಾ.ಮಹೇಶ್, ಕೆ.ಗೋಪಾಲಯ್ಯ, ಕೆ.ಸಿ.ನಾರಾಯಣಗೌಡ, ಕೆ.ಟಿ.ಶ್ರೀಕಂಠಯ್ಯ, ಎನ್.ಅಪ್ಪಾಜಿಗೌಡ, ಮಾಜಿ ಸಂಸದ ಎಚ್.ವಿಶ್ವನಾಥ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ನಾಗರತ್ನಾ ಸ್ವಾಮಿ, ಮುಖಂಡರಾದ ಬಿ.ಎಂ.ಫಾರೂಖ್, ಮಧು ಬಂಗಾರಪ್ಪ, ಎಂ.ಶ್ರೀನಿವಾಸ್, ಕೆ.ಅನ್ನದಾನಿ, ರವೀಂದ್ರ ಶ್ರೀಕಂಠಯ್ಯ, ಜಫ್ರುಲ್ಲಾಖಾನ್, ಎಲ್.ಆರ್.ಶಿವರಾಮೇಗೌಡ ಅವರು ಇದ್ದರು.

By R

You missed